ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜೊತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟುಮಾಡುವ ಬಹುಮುಖ ಶಿಕ್ಷಕರನ್ನು ಗುರ್ತಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಮೂಲಕ ಗೌರವಿಸುತ್ತಿದೆ.
2019-20ನೇ ಸಾಲಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.